ಪಶ್ಚಿಮ ಏಷ್ಯಾ ಸಂಘರ್ಷ : ಇಂಡೋನೇಷ್ಯಾ ವಿದೇಶಾಂಗ ಸಚಿವರೊಂದಿಗೆ ಡಾ. ಎಸ್. ಜೈಶಂಕರ್ ಮಾತುಕತೆ
ನವದೆಹಲಿ : ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತಾಗಿ ಭಾರತೀಯ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಂಡೋನೇಷ್ಯಾದ ವಿದೇಶಾಂಗ ಸಚಿವ ಸುಗಿಯೊನೊ ಅವರೊಂದಿಗೆ ಮಾತುಕತೆ ನಡೆಸಿದರು.
Pleased to talk to FM Sugiono of Indonesia.
Exchanged perspectives on the West Asia conflict. Discussed bilateral ties and agreed to hold the Joint Commission meeting at an early date. @Menlu_RI
— Dr. S. Jaishankar (@DrSJaishankar) March 12, 2026
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಸ್ ಜೈಶಂಕರ್, ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಪರಸ್ಪರ ದೃಷ್ಟಿಕೋನವನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಶೀಘ್ರದಲ್ಲಿ ಜಂಟಿ ಆಯೋಗದ ಸಭೆಯನ್ನು ನಡೆಸಲು ಒಪ್ಪಿಕೊಳ್ಳಲಾಗಿದೆ ಎಂದು ಅವರು ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.



