Sandalwood

ಮತ್ತೆ ತೆರೆಗೆ ಬರುತ್ತಿದೆ ಅಪ್ಪು ಅಭಿನಯದ `ಆಕಾಶ್’

ಬೆಂಗಳೂರು : ಸ್ಯಾಂಡಲ್‍ವುಡ್‍ನ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‍ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ `ಆಕಾಶ್’ ಮತ್ತೆ ತೆರೆಗೆ ಬರುತ್ತಿದೆ. ಅಪ್ಪು ಅವರ ಜನ್ಮದಿನದ ನಿಮಿತ್ತ 21 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಆಕಾಶ್ ಸಿನಿಮಾ ನಾಳೆ (ಮಾರ್ಚ್ 13)ರಂದು ಮರು ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ವಿಡಿಯೋವೊಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಮಾರ್ಚ್ 17 ಅಪ್ಪು ಅವರ ಹುಟ್ಟುಹಬ್ಬ. ಹೀಗಾಗಿ ಆಕಾಶ್ ಚಿತ್ರವನ್ನು 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. 2005ರಲ್ಲಿ ಬಿಡುಗಡೆಯಾದ ಈ ಸಿನಿಮಾ 25 ವಾರಗಳ ಕಾಲ ಪ್ರದರ್ಶನ ಕಂಡು ಗಮನ ಸೆಳೆದಿತ್ತು

ಈ ಸಿನಿಮಾದಲ್ಲಿ ರಮ್ಯಾ ಅವರು ಅಪ್ಪು ಅವರಿಗೆ ನಾಯಕಿಯಾಗಿದ್ದರು. ರಮ್ಯಾ ಕೂಡಾ ಈ ಮರುಬಿಡುಗಡೆ ಕುರಿತು ಸಂತಸ ವ್ಯಕ್ತಪಡಿಸಿ ವೀಡಿಯೋ ಹಂಚಿಕೊಂಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button