News Roundup

ಕಾರು ಲಾರಿ ನಡುವೆ ಅಪಘಾತ : ಮೂವರು ಪೊಲೀಸರ ದುರ್ಮರಣ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಘಟನೆ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಸಬ್‍ಇನ್‍ಸ್ಪೆಕ್ಟರ್‍ಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ. ಮೃತರನ್ನು ಮಂಜುನಾಥ್, ಅಂಬರೀಷ್, ಸಚಿನ್ ಎಂದು ಗುರುತಿಸಲಾಗಿದೆ. ಪಿಎಸ್‍ಐ ಈಶ್ವರ್ ಹಾಗೂ ಆರ್‍ಎಸ್‍ಐ ಮಹಾಂತೇಶ್ ಎಂಬವರು ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್‍ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Show More

Related Articles

Leave a Reply

Your email address will not be published. Required fields are marked *

Back to top button