News Roundup

ಆಳ್ವಾಸ್ ಕಾಲೇಜಿನಲ್ಲಿ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣ

ಮೂಡುಬಿದಿರೆ : ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕದ ಅನಾವರಣ ಕಾರ್ಯಕ್ರಮವು ಬುಧವಾರ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆಯಿತು.

ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ ಈ ಪುಸ್ತಕ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಯಕ್ಷಗಾನ ಗೊಂಬೆಯಾಟಕ್ಕೆ ಸುಮಾರು 300 ರಿಂದ 400 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಹಿಂದಿನ ಕಾಲದಲ್ಲಿ ರಾಮಾಯಣ, ಮಹಾಭಾರತ ಹಾಗೂ ಪುರಾಣ ಕಥೆಗಳನ್ನು ಜನರಿಗೆ ಸುಲಭವಾಗಿ ತಲುಪಿಸಲು ಈ ಕಲೆಯನ್ನು ಬಳಸಲಾಗುತ್ತಿತ್ತು. ಈ ಕಲೆಯು ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಸಾಂಸ್ಕøತಿಕ ಮೌಲ್ಯಗಳನ್ನು ಪರಿಚಯಿಸುವ ಮಹತ್ವದ ಮಾಧ್ಯಮವಾಗಿದೆ. ಆದರೆ ಈ ಆಧುನಿಕ ಯುಗದಲ್ಲಿ ಈ ಕಲೆ ನಿಧಾನವಾಗಿ ಕಣ್ಮರೆಯಾಗುತ್ತಿದ್ದು, ಇದನ್ನು ಉಳಿಸಲು ಸರ್ಕಾರ ಹಾಗೂ ಸಾಂಸ್ಕøತಿಕ ಸಂಸ್ಥೆಗಳು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಈ ಕಲೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರಕ್ಕೆ ಕೆಲವು ಮಹತ್ವದ ಯೋಜನೆಗಳನ್ನು ಈ ವರದಿ ಶಿಫಾರಸು ಮಾಡಿದೆ. ಈ ಶಿಫಾರಸುಗಳನ್ನು ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ಈ ಕಲೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಹೇಳಿದರು.

ಭಾರತ ಸರಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ವಲಯದ ಸಹಾಯಕ ನಿರ್ದೇಶಕಿ ರಾಜೇಶ್ವರಿ ಕೆ ಎಂ, ಸಹಾಯಕ ಡಿಸೈನರ್ ಅಶ್ವಿನ್ ಕುಮಾರ್, ಆಳ್ವಾಸ್ ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೇಶ್ ಕೈರೋಡಿ ಉಪಸ್ಥಿತರಿದ್ದರು. ಸುಪ್ರಿಯಾ ಭಾರದ್ವಾಜ್ ಕಾರ್ಯಕ್ರಮ ನಿರೂಪಿಸಿದರು.

Show More

Related Articles

Leave a Reply

Your email address will not be published. Required fields are marked *

Back to top button