Sandalwood
ಸಿನಿಮಾ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ ರಕ್ಷಿತಾ ಪ್ರೇಮ್
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟಿ ರಕ್ಷಿತಾ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಶ್ರೀರಾಮನವಮಿಯ ಸಂದರ್ಭದಲ್ಲಿ ತಮ್ಮ `ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ ಸಂಸ್ಥೆಯನ್ನು ಪ್ರೇಮ್ ಹಾಗೂ ರಕ್ಷಿತಾ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಸಂಸ್ಥೆಯ ಮೂಲಕ ಹೊಸ ಆಲೋಚನೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶ ಇವರಿಬ್ಬರದ್ದು. ಈ ಹೊಸ ಬ್ಯಾನರ್ನಲ್ಲಿ ಪ್ರೇಮ್ ಅವರ ಜೊತೆ ಸಹ-ನಿರ್ದೇಶಕರಾಗಿ ಹಾಗೂ ಚಿತ್ರಸಾಹಿತಿಯಾಗಿ ಕೆಲಸ ಮಾಡಿದ್ದ ಮಂಜುನಾಥ್ ಅವರು ಚಿತ್ರ ನಿರ್ದೇಶಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೀರ್ಷಿಕೆ ಘೋಷಣೆಯಾಗುವ ಸಾಧ್ಯತೆ ಇದೆ.



