Bollywood
ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ನಯನತಾರಾ ನಾಯಕಿ
ಬಾಲಿವುಡ್ ನಟ ಸಲ್ಮಾನ್ ಖಾನ್ ಹೊಸ ಸಿನಿಮಾ ಘೋಷಿಸಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರಕ್ಕೆ SVC63 ಎಂದು ಹೆಸರಿಡಲಾಗಿದೆ. ಈಗ ಈ ಸಿನಿಮಾದ ನಾಯಕಿಯ ಘೋಷಣೆ ಮಾಡಲಾಗಿದೆ. ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಸಲ್ಮಾನ್ ಖಾನ್‌ಗೆ ನಾಯಕಿಯಾಗಿ ಈ ಚಿತ್ರದಲ್ಲಿ ನಟಿಸಲಿದ್ದಾರೆ.
ಇದೇ ಮೊದಲ ಬಾರಿಗೆ ನಯನತಾರಾ ಹಾಗೂ ಸಲ್ಮಾನ್ ಖಾನ್ ತೆರೆ ಹಂಚಿಕೊಳ್ಳುತ್ತಿದ್ದಾರೆ. 2023ರಲ್ಲಿ ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರದ ಮೂಲಕ ನಯನತಾರಾ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದೀಗ ಮತ್ತೊಂದು ಬಾರಿ ನಯನತಾರಾ ಹಿಂದಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
View this post on Instagram
ಶ್ರೀ ವೆಂಟೇಶ್ವರ ಕ್ರಿಯೇಷನ್ಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ದಿಲ್ ರಾಜು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಂಶಿ ಪೈಡಿಪಲ್ಲಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಏಪ್ರಿಲ್‌ನಲ್ಲಿ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ.



