Sandalwood

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ಪೂಣಚ್ಚ-ಭುವನ್ ದಂಪತಿ

ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ದಂಪತಿ ಹಂಚಿಕೊಂಡಿದ್ದಾರೆ. ಈಗಾಗಲೇ ಒಂದು ಹೆಣ್ಣು ಮಗುವಿನ ಪೋಷಕರಾಗಿರುವ ಈ ಜೋಡಿ ಈಗ ಎರಡನೇ ಕಂದನ ನಿರೀಕ್ಷೆಯಲ್ಲಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ದಂಪತಿ ಪ್ಯಾರಿಸ್ ಐಫೆಲ್ ಟವರ್ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡು ಈ ಖುಷಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

`ನಮ್ಮ ಸಂಸಾರಕ್ಕೆ ಇನ್ನೊಂದು ಅತಿಥಿಯ ಆಗಮನ ಆಗಲಿದೆ. ಈ ಸೆಪ್ಟೆಂಬರ್‌ನಲ್ಲಿ ಪುಟಾಣಿ ಕಂದನ ನಿರೀಕ್ಷೆಯಲ್ಲಿದ್ದೇವೆ. ನಿಮ್ಮೆಲ್ಲರ ಹಾರೈಕೆ ಇರಲಿ’ ಎಂದು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಇವರು ಬರೆದುಕೊಂಡಿದ್ದಾರೆ.


ಹರ್ಷಿಕಾ ಮತ್ತು ಭುವನ್‌ 2023 ಆಗಸ್ಟ್‌ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2022ರಲ್ಲಿ ಈ ದಂಪತಿ ತಮ್ಮ ಮೊದಲ ಪುತ್ರಿ ತ್ರಿದೇವಿ ಪೊನ್ನಕ್ಕಳನ್ನು ಬರಮಾಡಿಕೊಂಡಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button