ಶಿಲ್ಪಾ ಗಣೇಶ್ ನಿರ್ಮಾಣದ ಕನ್ನಡ-ತುಳು `ಪಿಕ್ಚರ್’ನ ಮೊದಲ ಹಾಡು ರಿಲೀಸ್
ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ತಮ್ಮ `ಗೋಲ್ಡನ್ ಮೂವೀಸ್’ ಮೂಲಕ `ಪಿಕ್ಚರ್’ ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ತುಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. `ತಕ ತಕ ಕುಣಿಸಕ’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಚೇತನ್‍ಕುಮಾರ್ ರಚಿಸಿದ್ದಾರೆ. ತುಳುವಿನಲ್ಲಿ `ತಕ ತಕ ನಲಿಪುಗ’ ಹಾಡನ್ನು ಅನೂಪ್ ಭಂಡಾರಿ ಬರೆದಿದ್ದಾರೆ. ಸ್ಯಾಮುಯೆಲ್ ಅಭಿ ಸಂಗೀತ ಸಂಯೋಜಿಸಿದ್ದು, ಅದ್ವಿಕ್, ಏಂಜೆಲ್ ಮೇರಿ ಜೋಸೆಫ್, ಶಮೀರ್ ಮುಡಿಪು ಈ ಹಾಡುಗಳಿಗೆ ಧ್ವನಿಯಾಗಿದ್ದಾರೆ.
View this post on Instagram
ಸಂದೀಪ್ ಬೆದ್ರ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ನಿತ್ಯ ಪ್ರಕಾಶ್ ಬಂಟ್ವಾಳ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ಅಮೃತಾ ಸುದು ಜೋಡಿಯಾಗಿದ್ದಾರೆ. ಈಗಾಗಲೇ ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜು ವಾಮಂಜೂರು, ಸಾಯಿಕೃಷ್ಣ, ಸದಾಶಿವ ಅಮೀನ್ ಸೇರಿ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ.



