Sandalwood
ಬಿಳಿ ಬಣ್ಣದ ಸೀರೆಯುಟ್ಟು ಮಿಂಚಿದ ರಾಧಿಕಾ ಪಂಡಿತ್
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಈಗ ಸಿನಿಮಾ ಕೆಲಸಗಳಿಂದ ದೂರ ಇದ್ದು ಕುಟುಂಬದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರನ್ನು ವಿವಾಹವಾದ ಬಳಿಕ ರಾಧಿಕಾ ಸಿನಿಮಾಗಳಲ್ಲಿ ಅಷ್ಟಾಗಿ ಕಾಣಿಸಿಕೊಂಡಿಲ್ಲ. ಆದರೆ ಆಗಾಗ ತಮ್ಮ ಫೋಟೋಗಳನ್ನು, ಖುಷಿಯ ಕ್ಷಣಗಳನ್ನು ಇವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇದೀಗ ರಾಧಿಕಾ ಪಂಡಿತ್ ಅವರು ಸಾಂಪ್ರಾದಾಯಿಕ ದಿರಿಸು ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಸೀರೆಯುಟ್ಟು ರಾಧಿಕಾ ಮಿಂಚಿದ್ದಾರೆ.
View this post on Instagram
ಈ ಫೋಟೋಗೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೆಚ್ಚುಗೆಯ ಕಮೆಂಟ್‌ಗಳನ್ನೂ ಹಾಕಿದ್ದಾರೆ.



