`ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಚಿತ್ರದ ಟೈಟಲ್ ಬಿಡುಗಡೆ ಮಾಡಿದ ಸಿಎಂ
ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ ನಟನೆಯ `ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಚಿತ್ರದ ಟೈಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಚಿತ್ರವನ್ನು ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ನಿರ್ಮಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ನಮ್ಮ ಚಿತ್ರ **“ಸರ್ಕಾರಿ ನ್ಯಾಯ ಬೇಲೆ ಅಂಗಡಿ”**ಯ ಶೀರ್ಷಿಕೆಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ವಿಶೇಷ ಕ್ಷಣಕ್ಕೆ ಸಾಥ್ ನೀಡಿದ ಎಲ್ಲರಿಗೂ ಕೃತಜ್ಞತೆಗಳು; ನಿಮ್ಮ ಆಶೀರ್ವಾದ, ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಪ್ರಯಾಣ ಇನ್ನಷ್ಟು ಅರ್ಥಪೂರ್ಣವಾಗಿದೆ.… pic.twitter.com/jLMWJG7gRL
— Kumar Bangarappa (@kumarbangarappa) April 16, 2026
ಶೀರ್ಷಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಚಿತ್ರಕ್ಕೆ ಶುಭಕೋರಿದ್ದಾರೆ. ಬಿ ರಾಮಮೂರ್ತಿ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸಾತ್ವಿಕ್ ಪವನ್ ಕುಮಾರ್ ನಿರ್ದೇಶನ ಮತ್ತು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ಕುಮಾರ್ ಬಂಗಾರಪ್ಪ ಮತ್ತು ದೊಡ್ಡಣ್ಣ ಸೇರಿದಂತೆ ಹಲವರು ನಟಿಸಿದ್ದಾರೆ.



