Sandalwood
ಶಿವಣ್ಣ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ
ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರ ಹೊಸ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ. ಕೆವಿಎನ್ ಸಂಸ್ಥೆ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಈ ಚಿತ್ರಕ್ಕೆ ಬೇಲ್ ಎಂದು ಹೆಸರಿಡಲಾಗಿದೆ.
ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿರುವ ಚಿತ್ರ ಗಮನ ಸೆಳೆದಿದೆ. ಈ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.
ಅಣ್ಣಾವ್ರ ಹುಟ್ಟುಹಬ್ಬದ ದಿನ ದೊಡ್ಡೋರು ಬಂದ್ರು..#Bail First Look | Teaser Soon @KvnProductions @NimmaShivanna @PavanWadeyar @AJANEESHB @PROHarisarasu @The_BigLittle pic.twitter.com/GvE4DhyD7p
— Pavan Wadeyar (@PavanWadeyar) April 24, 2026
ವೆಂಕಟ್ ಕೆ ನಾರಾಯಣ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಹಲವು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ.



