Sandalwood

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಂ ಸೋ’ ಅಶೋಕ

ಕನ್ನಡ ಮತ್ತು ತುಳುಚಿತ್ರರಂಗ ಹಾಗೂ ತುಳುರಂಗಭೂಮಿಯಲ್ಲಿ ಸಕ್ರಿಯರಾಗಿರುವ, ‘ಸು ಫ್ರಂ ಸೋ’ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ, ನಿರ್ದೇಶಕ ಜೆ.ಪಿ.ತೂಮಿನಾಡು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ರಶ್ಮಿಕಾ ಅವರೊಂದಿಗೆ ಜೆಪಿ ತೂಮಿನಾಡು ಹೊಸ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ತುಳು ಹಾಸ್ಯ ನಾಟಕ, ಕನ್ನಡ ಚಿತ್ರಗಳಲ್ಲಿ ನಟಿಸಿ ಜೆ ಪಿ ತೂಮಿನಾಡು ಗಮನ ಸೆಳೆದಿದ್ದಾರೆ. ರಾಜ್ ಬಿ. ಶೆಟ್ಟಿ ನಿರ್ದೇಶನದ ‘ಒಂದು ಮೊಟ್ಟೆಯ ಕಥೆ’ ಸಿನಿಮಾದಲ್ಲಿ ಸಣ್ಣದೊಂದು ಪಾತ್ರದ ಮೂಲಕ ಇವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಬಳಿಕ ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ, ಸ್ವಾತಿ ಮುತ್ತಿನ ಮಳೆ ಹನಿಯೇ, ಕಥಾಸಂಗಮ, ಗರುಡ ಗಮನ ವೃಷಭ ವಾಹನ ಸಿನಿಮಾಗಳಲ್ಲಿ ನಟಿಸಿದ್ದರು.


ಜೆ ಪಿ ಅವರಿಗೆ ಇನ್ನಷ್ಟು ಹೆಸರು ತಂದುಕೊಟ್ಟಿದ್ದು, ಇವರ ನಿರ್ದೇಶನದ ಸು ಫ್ರಂ ಸೋ ಚಿತ್ರ. ಈ ಸಿನಿಮಾದಲ್ಲಿ ಇವರು ಅಶೋಕ ಎಂಬ ಪಾತ್ರವನ್ನೂ ನಿರ್ವಹಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button