Sandalwood

ಅಮೃತಸರದ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪಂಜಾಬ್‌ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂಬಂಧ ದರ್ಶನ್ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ಸಿಖ್ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರ ಗೋಲ್ಡನ್ ಟೆಂಪಲ್‌ಗೆ ಅಥವಾ ಹರ್ಮಂದಿರ್ ಸಾಹಿಬ್ ಭೇಟಿ ನೀಡಿದ ವಿಜಯಲಕ್ಷ್ಮಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ‘ಜೀವನದ ಕಷ್ಟದ ಸಂದರ್ಭದಲ್ಲಿ ನಗುವುದು ಸುಲಭವಲ್ಲ. ಅದು ನೀವು ನಂಬಿದ ದೇವರು ನಿಮಗೆ ಕೊಟ್ಟ ದೊಡ್ಡ ಶಕ್ತಿ’ ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Vijayalakshmi darshan (@viji.darshan)


ಇವರು ಹಂಚಿಕೊಂಡಿರುವ ಫೋಟೋಗಳಲ್ಲಿ ವಿಜಯಲಕ್ಷ್ಮೀ ಸ್ವರ್ಣ ಮಂದಿರದ ಸುತ್ತ ಇರುವ ಅಮೃತ ಸರೋವರದ ಪರಿಸರದಲ್ಲಿ ನಿಂತು ಅಲ್ಲಿನ ಪರಿಸರವನ್ನು ಆನಂದಿಸುತ್ತಿರುವುದನ್ನು ನೋಡಬಹುದು. ಸದ್ಯ ಈ ಫೋಟೋಗಳಿಗೆ ದರ್ಶನ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button