Sandalwood

ರೀ ರಿಲೀಸ್ ಆಗುತ್ತಿದೆ `ಉಪೇಂದ್ರ’ ಸಿನಿಮಾ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ `ಉಪೇಂದ್ರ’ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಪರಮೇಶ್ವರ್ ಬಿ ಈ ಸಿನಿಮಾ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಈ ಸಿನಿಮಾವನ್ನು ಜೂನ್ 4 ರಂದು ರಾಜ್ಯಾದ್ಯಂತ ಸುಮಾರು 100 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದ ಮೈಲಿಗಲ್ಲು ಚಿತ್ರಗಳನ್ನ ಇಂದಿನ ಪ್ರೇಕ್ಷಕರಿಗೆ ತಿಳಿಸುವ ನಿಟ್ಟಿನಲ್ಲಿ ಈ ಸಿನಿಮಾದ ಮರುಬಿಡುಗಡೆ ಮಾಡಲಾಗುತ್ತಿದೆ ಎಂದು ಇವರು ತಿಳಿಸಿದ್ದಾರೆ.

1999ರಲ್ಲಿ ಉಪೇಂದ್ರ ಚಿತ್ರ ಬಿಡುಗಡೆಯಾಗಿತ್ತು. ಇದು ಸೈಕಾಲಾಜಿಕಲ್ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದ್ದು, ಇದರಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್, ಪ್ರೇಮಾ, ದಾಮಿನಿ ಅಭಿನಯಿಸಿದ್ದರು. ಗುರುಕಿರಣ್ ಸಂಗೀತ ನೀಡಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button