Sandalwood
ಬೇಲ್ ಚಿತ್ರದಲ್ಲಿ ಶಿವಣ್ಣನ ಫಸ್ಟ್ ಲುಕ್ ಬಿಡುಗಡೆ

ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಬೇಲ್ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಇವರ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದೆ. ಕೆವಿಎನ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೊನೆಯ ಹಂತದಲ್ಲಿ ಚಿತ್ರೀಕರಣದಲ್ಲಿ ಚಿತ್ರತಂಡ ತೊಡಗಿದೆ. ಈ ಸಿನಿಮಾದಲ್ಲಿ ವಿಜಿ ಎಂಬ ಪಾತ್ರವನ್ನು ಶಿವರಾಜ್ಕುಮಾರ್ ಅವರು ನಿರ್ವಹಿಸುತ್ತಿದ್ದಾರೆ.



