Sandalwood

`ಟಾಕ್ಸಿಕ್‌’ನಲ್ಲಿ ಯಶ್ ಪಾತ್ರದ ಫೋಟೋ ಬಿಡುಗಡೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ `ಟಾಕ್ಸಿಕ್’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗ ಚಿತ್ರತಂಡ ಈ ಚಿತ್ರದಲ್ಲಿನ ಯಶ್‌ ಪಾತ್ರದ ಹೊಸ ಫೋಟೋಗಳನ್ನು ಹಂಚಿಕೊಂಡಿದೆ.

ಚಿತ್ರತಂಡ ಹಂಚಿಕೊಂಡಿರುವ ಈ ಫೋಟೋಗಳಲ್ಲಿ ಯಶ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಂಟೇಜ್ ಕಾರಿಗೆ ಒರಗಿ ನಿಂತಿರುವ ಯಶ್ ಅವರನ್ನು ಇಲ್ಲಿ ನೋಡಬಹುದು. ಇವರ ಸುತ್ತಲೂ ಬಂದೂಕು ಹಿಡಿದ ತಂಡವೂ ಕಾಣಿಸುತ್ತದೆ. ಸಹಜವಾಗಿಯೇ ಈ ಫೋಟೋಗಳು ಈಗ ನೆಟ್ಟಿಗರ ಗಮನ ಸೆಳೆದಿದೆ.


ಗೀತು ಮೋಹನ್‌ದಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಸೇರಿ ಹಲವರು ನಟಿಸಿದ್ದಾರೆ.

ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಿದೆ. ಮಾರ್ಚ್ 19 ಬಳಿಕ ಜೂನ್ 4 ರಂದು ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಈ ದಿನವೂ ಮುಂದಕ್ಕೆ ಹೋಗಿದ್ದು, ಹೊಸ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

Show More

Related Articles

Leave a Reply

Your email address will not be published. Required fields are marked *

Back to top button