ಬ್ರಹ್ಮ ಮುಹೂರ್ತದಲ್ಲಿ ಬಿಡುಗಡೆಯಾದ ರಾಮಾಯಣ ಟ್ರೇಲರ್ : ರಾವಣನಾಗಿ ಯಶ್ ಅಬ್ಬರ

ಬಾಲಿವುಡ್ನ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟ್ರೇಲರ್ ಗುರುವಾರ ಬ್ರಹ್ಮ ಮುಹೂರ್ತದಲ್ಲಿ ಬಿಡುಗಡೆಯಾಗಿದೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡರೆ, ಪ್ರಚಂಡ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರಿಸಿದ್ದಾರೆ. ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ.
4 ನಿಮಿಷ 10 ಸೆಕೆಂಡುಗಳ ಈ ಟ್ರೇಲರ್ ರಾಮಾಯಣದ ಕಥೆಯನ್ನು ಕಣ್ಣೆದುರು ತರುತ್ತದೆ. ಆದರೂ ಈ ಟ್ರೇಲರ್ನಲ್ಲಿ ಹನುಮಾನ್ ದರ್ಶನ ಆಗದೇ ಇರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಈ ಬಗ್ಗೆ ಕಮೆಂಟ್ನಲ್ಲಿ ಸಾಕಷ್ಟು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಹನುಮಾನ್ ಪಾತ್ರದಲ್ಲಿ ಹಿರಿಯ ನಟ ಸನ್ನಿ ಡಿಯೋಲ್ ಕಾಣಿಸಿಕೊಂಡಿದ್ದಾರೆ.
ರಾಮಾಯಣ ಸಿನಿಮಾವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಬಹುತೇಕ ರಾಮಾಯಣದ ಮೊದಲ ಭಾಗ ಸೀತಾ ಅಪಹರಣದೊಂದಿಗೆ ಕೊನೆಗೊಳ್ಳುವ ಸಾಧ್ಯತೆ ಇದೆ. ಈ ಚಿತ್ರದ ಮೊದಲ ಭಾಗವು ಈ ದೀಪಾವಳಿಗೆ ಬಿಡುಗಡೆಯಾಗಲಿದೆ. ಎರಡನೇ ಭಾಗವು ಮುಂದಿನ ವರ್ಷ ಬಿಡುಗಡೆಯಾಗಲಿದೆ.



