Tollywood

ನಟಿ ರಶ್ಮಿಕಾ ಮಂದಣ್ಣರಿಗೆ ಗಾಯ : ಹಾಡಿನ ಶೂಟಿಂಗ್ ವೇಳೆ ಘಟನೆ : ವಿಶ್ರಾಂತಿಗೆ ವೈದ್ಯರ ಸೂಚನೆ

ಹೈದರಾಬಾದ್ : ನಟಿ ರಶ್ಮಿಕಾ ಮಂದಣ್ಣ ಈಗ ಹಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ಇದೀಗ ಶೂಟಿಂಗ್ ಸೆಟ್‍ನಲ್ಲಿ ರಶ್ಮಿಕಾ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದು, ಶೀಘ್ರ ಚೇತರಿಕೆಗೆ ಹಾರೈಸುತ್ತಿದ್ದಾರೆ.

ನೃತ್ಯ ಚಿತ್ರೀಕರಣದ ಸಮಯದಲ್ಲಿ ರಶ್ಮಿಕಾ ಸೊಂಟಕ್ಕೆ ಗಾಯಗಳಾಗಿವೆ ಎಂದು ಹೇಳಲಾಗುತ್ತದೆ. ಸದ್ಯ ಇವರಿಗೆ ವೈದ್ಯರು ಆರು ವಾರಗಳ ಕಾಲ ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ರಶ್ಮಿಕಾ ಮತ್ತು ಅವರ ತಂಡವು ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಅಭಿಮಾನಿಗಳು ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ರಶ್ಮಿಕಾ ಅವರ ಚೇತರಿಕೆಗೆ ಹಾರೈಸುತ್ತಿದ್ದಾರೆ.

ಪ್ರಸ್ತುತ ರಣಬಾಲಿ ಮತ್ತು ಮೈಸಾ ಸೇರಿದಂತೆ ಕೆಲವು ದೊಡ್ಡ ಬಜೆಟ್ ಚಿತ್ರಗಳಲ್ಲಿ ರಶ್ಮಿಕಾ ಕೆಲಸ ಮಾಡುತ್ತಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button