ಭಾರೀ ಮಳೆ : ಮಂಗಳೂರು- ಪುತ್ತೂರು ಉಪವಿಭಾಗದ ಶಾಲೆಗಳಿಗೆ ಆಗಸ್ಟ್ 3 ರಂದು ರಜೆ ಘೋಷಣೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗ ಹಾಗೂ ಪುತ್ತೂರು ಉಪವಿಭಾಗದ ಶಾಲೆಗಳಿಗೆ ಆಗಸ್ಟ್ 3 (ಸೋಮವಾರ) ರಂದು ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ಉಪವಿಭಾಗ : ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು 10ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ಎಲ್ಲಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಪುತ್ತೂರು ಉಪವಿಭಾಗ : ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, ಎಲ್ಲಾ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳು 12ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ಎಲ್ಲಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೊತೆಗೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗರೂಕತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದೆ.



