Sandalwood

ಋತುತಾರೆ ಯೋಜನೆಗೆ ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್

ರಾಜ್ಯ ಸರ್ಕಾರ ಋತುತಾರೆ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದ್ದು, ಸ್ಯಾಂಡಲ್‍ವುಡ್ ನಟಿ, ಮಾಜಿ ಸಂಸದೆ ರಮ್ಯಾ ಈ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ.

ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಜನೆ ಕುರಿತು ಮಾಹಿತಿ ನೀಡಿದರು.

ಸ್ತ್ರೀಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಅಧ್ಯಯನ ಹಾಗೂ ಪರಿಹಾರ ಕ್ರಮಗಳಿಗಾಗಿ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಯೋಜನೆಗೆ ನಟಿ ರಮ್ಯಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button