Bollywood

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ರಣವೀರ್ ಸಿಂಗ್ ಭೇಟಿ : ಪ್ರಾರ್ಥನೆ

ದೈವಕ್ಕೆ ಅಪಮಾನ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಿದ್ದಾರೆ.

ಗೋವಾ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಕಾಂತಾರ-1 ಚಿತ್ರದಂತೆ ಇವರು ಅನುಕರಣೆ ಮಾಡಿದ್ದರು. ಹೀಗಾಗಿ ಇವರ ವಿರುದ್ಧ ದೈವಕ್ಕೆ ಅಪಮಾನ ಮಾಡಿದ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಅವರು ಬೇಷರತ್ ಕ್ಷಮೆಯಾಚಿಸಿದ್ದರು. ಇದಾದ ಬಳಿಕ ನಟನ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಕಳೆದ ತಿಂಗಳು ರದ್ದುಗೊಳಿಸಿತ್ತು.


ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button