Bollywood

ಮೌನವಾಯಿತು ಮಧುರ ಕಂಠ : ಹಿರಿಯ ಗಾಯಕಿ ಆಶಾ ಭೋಸ್ಲೆ ವಿಧಿವಶ

ಭಾರತದ ಹಿರಿಯ ಗಾಯಕಿ, ಗಾಯನ ಲೋಕದ ದಂತಕತೆ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಶನಿವಾರ ರಾತ್ರಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರಾದ ಬಳಿಕ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು.

ಹೃದಯ ಮತ್ತು ಉಸಿರಾಟದ ತೊಂದರೆಗಳಿಂದ ಇವರು ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಿAದ ಇವರ ಆರೋಗ್ಯ ಹದಗೆಟ್ಟಿತ್ತು ಎನ್ನಲಾಗುತ್ತದೆ. ನಾಳೆ ಇವರ ಅಂತ್ಯಕ್ರಿಯೆ ನಡೆಯಲಿದೆ.

ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ, ಜನಪ್ರಿಯ ಗಾಯಕಿಯರಲ್ಲಿ ಆಶಾ ಭೋಸ್ಲೆ ಕೂಡಾ ಒಬ್ಬರು. ಇವರು ಮತ್ತೋರ್ವ ಜನಪ್ರಿಯ ಗಾಯಕಿ ದಿವಂಗತ ಲತಾ ಮಂಗೇಶ್ಕರ್ ಅವರ ಸೋದರಿಯೂ ಹೌದು. ಆಶಾ ಬೋಂಸ್ಲೆ ಅವರು ತಮ್ಮ 9ನೇ ವಯಸ್ಸಿನಲ್ಲಿ ವೃತ್ತಿಪರವಾಗಿ ಹಾಡಲು ಪ್ರಾರಂಭಿಸಿದರು. 1943ರಲ್ಲಿ ತಮ್ಮ ಮೊದಲ ಚಲನಚಿತ್ರ ಹಾಡನ್ನು ಇವರು ರೆಕಾರ್ಡ್ ಮಾಡಿದ್ದರು. 50ರ ದಶಕದ ಹೊತ್ತಿಗೆ, ಬಾಲಿವುಡ್‌ನಲ್ಲಿ ತಮಗಾಗಿ ಒಂದು ಸ್ಥಾನವನ್ನು ಗಟ್ಟಿಗೊಳಿಸಿದ್ದರು. ಇವರು ಏಳು ಬಾರಿ ಫಿಲ್ಮ್ಫೇರ್ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು, ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು.

Show More

Related Articles

Leave a Reply

Your email address will not be published. Required fields are marked *

Back to top button