News Roundup
ಶಿರಾಡಿ : ರಾಜಹಂಸ-ಕಾರಿನ ನಡುವೆ ಡಿಕ್ಕಿ : ಮೂವರ ದುರ್ಮರಣ

ಗುಂಡ್ಯ (ನೆಲ್ಯಾಡಿ) : ಧರ್ಮಸ್ಥಳದಿಂದ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಶುಕ್ರವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಚಂದ್ರಶೇಖರ ಗೌಡ, ಶ್ರೀಧರ ಮತ್ತು ಉಮೇಶ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸುರೇಶ್ ಎಂಬವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲಾ ಹಾಸನದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಈ ಅಪಘಾತ ಸಂಭವಿಸಿದೆ. ಇವರೆಲ್ಲಾ ಬೆಳ್ತಂಗಡಿ, ಉಜಿರೆ ಭಾಗದ ನಿವಾಸಿಗಳಾಗಿದ್ದಾರೆ.



