News Roundup

ಪಶ್ಚಿಮ ಏಷ್ಯಾ ಸಂಘರ್ಷ : ಇಂಡೋನೇಷ್ಯಾ ವಿದೇಶಾಂಗ ಸಚಿವರೊಂದಿಗೆ ಡಾ. ಎಸ್. ಜೈಶಂಕರ್ ಮಾತುಕತೆ

ನವದೆಹಲಿ : ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತಾಗಿ ಭಾರತೀಯ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಂಡೋನೇಷ್ಯಾದ ವಿದೇಶಾಂಗ ಸಚಿವ ಸುಗಿಯೊನೊ ಅವರೊಂದಿಗೆ ಮಾತುಕತೆ ನಡೆಸಿದರು.

ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಸ್ ಜೈಶಂಕರ್, ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಪರಸ್ಪರ ದೃಷ್ಟಿಕೋನವನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಶೀಘ್ರದಲ್ಲಿ ಜಂಟಿ ಆಯೋಗದ ಸಭೆಯನ್ನು ನಡೆಸಲು ಒಪ್ಪಿಕೊಳ್ಳಲಾಗಿದೆ ಎಂದು ಅವರು ತಮ್ಮ ಪೋಸ್ಟ್‍ನಲ್ಲಿ ಹೇಳಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button