News Roundup

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚರ್ಚೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿಡುವ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, `ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಬಂದಿತು. ವಿವಿಧ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಿರುವ ಗಣನೀಯ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿರಿಸುವ ಮಹತ್ವದ ಬಗ್ಗೆಯೂ ನಾವು ಚರ್ಚಿಸಿದ್ದೇವೆ’ ಎಂದು ಅವರು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.


ಇನ್ನು ಭಾರತದಲ್ಲಿರುವ ಅಮೆರಿಕಾ ರಾಯಭಾರಿ ಸರ್ಗಿಯೊ ಗೋರ್ ಅವರು ಕೂಡಾ ಈ ಮಾತುಕತೆಯನ್ನು ಧನಾತ್ಮಕ ಸಂಕೇತ ಎಂದು ಬಣ್ಣಿಸಿದ್ದಾರೆ. ತಮ್ಮ ಎಕ್ಸ್ ಖಾತೆ ಪೋಸ್ಟ್ ನಲ್ಲಿ ಸರ್ಗಿಯೊ ಗೋರ್, `ತುಂಬಾ ಸಕಾರಾತ್ಮಕ ಹಾಗೂ ಫಲದಾಯಕ ಕರೆ’ ಎಂದು ಬರೆದುಕೊಂಡಿದ್ದಾರೆ.


ಇರಾನ್ ಹಾಗೂ ಅಮೆರಿಕಾ ನಡುವಿನ ತಾತ್ಕಾಲಿಕ ಕದನ ವಿರಾಮದ ಬಳಿಕ ಉಭಯ ನಾಯಕರು ಮೊದಲ ಬಾರಿಗೆ ಮಾತುಕತೆ ನಡೆಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button