News Roundup
ರಸ್ತೆ ಬದಿಯಲ್ಲಿ ಕಸ ಎಸೆದರೆ ರೂ.1000 ದಂಡ : ತೆಂಕಮಿಜಾರ್ ಪಂಚಾಯತ್ನಿಂದ ನಿರ್ಧಾರ

ಮೂಡುಬಿದರೆ : ರಸ್ತೆ ಬದಿಯಲ್ಲಿ, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತೆಂಕಮಿಜಾರ್ ಪಂಚಾಯತ್ ನಿರ್ಧಾರ ಮಾಡಿದೆ. ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಕಸ ಎಸೆಯುವುದು ಹಾಗೂ ಸುಡುವುದು ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪಂಚಾಯತ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ರಸ್ತೆ ಬದಿಯಲ್ಲಿ ಕಸ ಬಿಸಾಡುವುದು, ಸುಡುವುದು ಮತ್ತು ಏಕಬಳಕೆಯ ಪ್ಲಾಸ್ಟಿಕ್ ಅಂಗಡಿಗಳಲ್ಲಿ ಬಳಸುವುದು ಕಂಡು ಬಂದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ತಪ್ಪಿದ್ದಲ್ಲಿ ಅಂತವರ ವಿರುದ್ಧ ಎಫ್. ಐ. ಆರ್. ದಾಖಲಿಸಲಾಗುವುದು ಎಂದು ತಿಳಿಸಲಾಗಿದೆ.
ತಿಳಿಸಿದವರಿಗೆ ಬಹುಮಾನ :
ರಸ್ತೆ ಬದಿ ತ್ಯಾಜ್ಯ ಎಸೆಯುವವರ ಬಗ್ಗೆ ಸೂಕ್ತ ದಾಖಲೆಯೊಂದಿಗೆ ಮಾಹಿತಿ ನೀಡಿದರೆ ಗ್ರಾಮ ಪಂಚಾಯತ್ ವತಿಯಿಂದ ಬಹುಮಾನ ನೀಡಲಾಗುವುದು ಎಂದೂ ಪ್ರಕಟನೆಯಲ್ಲಿ ಗ್ರಾಮ ಪಂಚಾಯತ್ ತಿಳಿಸಿದೆ.



