Sandalwood
ರಾವಣನ ಪ್ರತಿಕೃತಿ ಎದುರು ನಟಿ ರಾಧಿಕಾ ಪಂಡಿತ್ ಫೋಟೋಗೆ ಪೋಸ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ `ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಯಶ್ ಇಲ್ಲಿ ರಾವಣನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಯಶ್ ಲುಕ್ ಈಗ ಸಖತ್ ಸದ್ದು ಮಾಡುತ್ತಿದೆ. ಈ ಟ್ರೇಲರ್ ಬೆನ್ನಲ್ಲೇ ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
View this post on Instagram
ರಾವಣನ ಪ್ರತಿಕೃತಿ ಎದುರು ರಾಧಿಕಾ ಪಂಡಿತ್ ಫೋಟೋಗೆ ಪೋಸ್ ನೀಡಿದ್ದು, ‘ಗೊತ್ತಿರುವವರಿಗೆ ಮಾತ್ರ ಗೊತ್ತು’ ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ರಾಧಿಕಾ ಪಂಡಿತ್ ಅವರು ಹಂಚಿಕೊಂಡಿರುವ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



