Sandalwood
ಫ್ರೀಡಂ ಪಾರ್ಕ್ ನಲ್ಲಿ ಕಣ್ಣೀರಿಟ್ಟ ನಟಿ ರಮ್ಯಾ!
ಬೀದಿ ಶ್ವಾನಗಳ ಬಲವಂತದ ಸ್ಥಳಾಂತರ ಬಗ್ಗೆ ಮಾತನಾಡುತ್ತಾ ಸ್ಯಾಂಡಲ್‌ವುಡ್ ನಟಿ ರಮ್ಯಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಪಾಲ್ಗೊಂಡಿದ್ದ ರಮ್ಯಾ, ನಾಪತ್ತೆಯಾಗಿರುವ ಶ್ವಾನಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ ಎಂದು ಹೇಳಿದ್ದಾರೆ.
View this post on Instagram
ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಮ್ಯಾ, ಶ್ವಾನಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿರುವುದು ಅಮಾನವೀಯ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದರು.



