Sandalwood
ನಟ ಚಿಕ್ಕಣ್ಣ ವಿವಾಹಕ್ಕೆ ದಿನಾಂಕ ನಿಗದಿ : ಮೈಸೂರಿನಲ್ಲಿ ಕಲ್ಯಾಣ
ಸ್ಯಾಂಡಲ್ವುಡ್ ನಟ ಚಿಕ್ಕಣ್ಣ ಹಾಗೂ ಪಾವನಾ ಅವರ ವಿವಾಹ ಆಗಸ್ಟ್ 29 ಮತ್ತು 30 ರಂದು ಮೈಸೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮೈಸೂರಿನ ಸ್ಪೆಕ್ಟ್ರಮ್ ಹಾಲ್ನಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದವರಾದ ಪಾವನಾ ಎಂಜಿನಿಯರಿಂಗ್ ಪದವೀಧರೆಯಾಗಿದ್ದಾರೆ. ಚಿಕ್ಕಣ್ಣ ಸ್ಯಾಂಡಲ್ವುಡ್ನಲ್ಲಿ ಬೇಡಿಕೆಯ ನಟರಾಗಿದ್ದಾರೆ.



