ರಾಮ್ಚರಣ್ `ಪೆದ್ದಿ’ ಸಿನಿಮಾದ ಸ್ಪೆಷಲ್ ಗ್ಲಿಂಪ್ಸ್ ರಿಲೀಸ್ : ಧ್ವನಿ ನೀಡಿ ಶುಭ ಹಾರೈಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್
ತೆಲುಗಿನ ಖ್ಯಾತ ನಟ ರಾಮ್ ಚರಣ್ ಅಭಿನಯದ `ಪೆದ್ದಿ’ ಚಿತ್ರದ ವಿಶೇಷ ಗ್ಲಿಂಪ್ಸ್ ಬಿಡುಗಡೆಯಾಗಿದೆ. ರಾಮ್ಚರಣ್ 41ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇದನ್ನು ಬಿಡುಗಡೆ ಮಾಡಲಾಗಿದ್ದು, ಪೈಲ್ವಾನ್ ಲುಕ್ನಲ್ಲಿ ರಾಮ್ ಚರಣ್ ಕಾಣಿಸಿಕೊಂಡಿದ್ದಾರೆ. ಈ ಕನ್ನಡದ ಟೀಸರ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.
ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಶಿವಣ್ಣ ರಾಮ್ ಚರಣ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. `ನೀವು ಒಂದು ಪಾತ್ರಕ್ಕೆ ಜೀವ ತುಂಬುವ ರೀತಿ, ಅದಕ್ಕಾಗಿ ನೀವು ಪಡುವ ಶ್ರಮವನ್ನು ಹತ್ತಿರದಿಂದ ನೋಡಿದ್ದೇನೆ. ನಿಮ್ಮೊಟ್ಟಿಗೆ ಕೆಲಸ ಮಾಡಿರುವುದು ತುಂಬಾ ಖುಷಿ ಕೊಟ್ಟಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
View this post on Instagram
ಬುಚ್ಚಿ ಬಾಬು ಸನಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಅವರು ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನೀಡಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಏಪ್ರಿಲ್ 30ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.



