Sandalwood

ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂಪಾಯಿ ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ರಕ್ಷಿತ್ ಒಡೆತನದ ಪರಂವಾ ಸ್ಟುಡಿಯೋಸ್ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಅನುಮತಿ ಇಲ್ಲದೆ ಎಂಆರ್‌ಟಿ ಮ್ಯೂಸಿಕ್ ಕಂಪನಿಗೆ ಸೇರಿದ ಎರಡು ಹಾಡುಗಳನ್ನು ಬಳಸಿದ್ದಕ್ಕಾಗಿ ದಂಡ ವಿಧಿಸಿ ನ್ಯಾಯಮೂರ್ತಿ ತೇಜಸ್ ಕರಿಯಾ ಆದೇಶ ನೀಡಿದ್ದಾರೆ.

ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ `ಒಮ್ಮೆ ನಿನ್ನನ್ನು’ ಮತ್ತು ‘ನ್ಯಾಯ ಎಲ್ಲಿದೆ’ ಎಂಬ ಎರಡು ಹಳೆಯ ಹಾಡುಗಳ ತುಣುಕುಗಳನ್ನು ಬಳಸಲಾಗಿತ್ತು. ಈ ಹಾಡುಗಳ ಹಕ್ಕು ಹೊಂದಿದ್ದ ಎಂಆರ್‌ಟಿ ಮ್ಯೂಸಿಕ್ ಕಂಪನಿ ಈ ಬಗ್ಗೆ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.

ವಾದದ ವೇಳೆ ರಕ್ಷಿತ್ ಶೆಟ್ಟಿ ಪರ ವಕೀಲರು `ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು 31 ಸೆಕೆಂಡ್ ಮಾತ್ರ ಬಳಕೆ ಮಾಡÀಲಾಗಿದೆ. ಇದು ಅತೀ ಕಡಿಮೆ ಅವಧಿ ಆಗಿರುವುದರಿಂದ ಕಾಫಿರೈಟ್ ಉಲ್ಲಂಘನೆಯಾಗುವುದಿಲ್ಲ ಎಂದು ವಾದಿಸಿದ್ದರು. ಆದರೆ ಈ ಸಮರ್ಥನೆಯನ್ನು ನ್ಯಾಯಾಲಯ ತಳ್ಳಿ ಹಾಕಿತ್ತು.

ಇದರಲ್ಲಿ 20 ಲಕ್ಷ ರೂಪಾಯಿ ಕಾಪಿರೈಟ್ ಉಲ್ಲಂಘನೆಗಾಗಿಯಾಗಿದ್ದರೆ, ಇನ್ನು ಉಳಿದ 5 ಲಕ್ಷ ರೂಪಾಯಿ ನ್ಯಾಯಾಲಯದ ಆದೇಶ ಪಾಲಿಸಲು ವಿಳಂಬ ಮಾಡಿದ್ದಕ್ಕಾಗಿ ವಿಧಿಸಲಾಗಿದೆ. ಈ ಹಿಂದೆ ಕೋರ್ಟ್ ನೀಡಿದ್ದ ಗಡುವಿನೊಳಗೆ ದಂಡದ ಮೊತ್ತವನ್ನು ಪಾವತಿಸದ ಕಾರಣ ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿತ್ತು. ಆದರೆ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಸ್ ಕ್ಷಮಾಪಣಾ ಅಫಿಡವಿಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಯ ಬದಲಿಗೆ 5 ಲಕ್ಷ ರೂಪಾಯಿಗಳ ಹೆಚ್ಚುವರಿ ದಂಡವನ್ನು ವಿಧಿಸಿ ಪ್ರಕರಣವನ್ನು ಇತ್ಯರ್ಥಪಡಿಸಿತು.

Show More

Related Articles

Leave a Reply

Your email address will not be published. Required fields are marked *

Back to top button