Sandalwood

ಜೂನ್ 4ಕ್ಕೆ ಬರುತ್ತಿಲ್ಲ ಯಶ್ ಟಾಕ್ಸಿಕ್ : ಮತ್ತೆ ಮುಂದಕ್ಕೆ ಹೋದ ಬಿಡುಗಡೆ ದಿನಾಂಕ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಈ ಹಿಂದೆ ಮಾರ್ಚ್ 19 ಕ್ಕೆ ನಿಗದಿಯಾಗಿದ್ದ ಚಿತ್ರ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿತ್ತು. ಇದೀಗ ಈ ದಿನಾಂಕ ಮತ್ತೆ ಮುಂದಕ್ಕೆ ಹೋಗಿದ್ದು, ಶೀಘ್ರದಲ್ಲೇ ವಿಶ್ವಾದ್ಯಂತ ಬಿಡುಗಡೆಗೆ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಪ್ರೊಡಕ್ಷನ್ ಹೌಸ್ ತಿಳಿಸಿದೆ

 

View this post on Instagram

 

A post shared by Yash (@thenameisyash)


ಸದ್ಯ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಹೀಗಾಗಿ ಅಂತಾರಾಷ್ಟ್ರೀಯ ವಿತರಣೆಯನ್ನು ಭದ್ರಪಡಿಸುವುದು ಮತ್ತು ಪ್ರಮುಖ ಪಾಲುದಾರಿಕೆಗಳನ್ನು ರೂಪಿಸುವತ್ತ ಗಮನ ಹರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಈ ಚಿತ್ರದಲ್ಲಿ ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ಟಾಕ್ಸಿಕ್ ಅನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾಗಿದೆ. ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಚಿತ್ರ ಬಿಡುಗಡೆಯಾಗಲಿದೆ.

Show More

Related Articles

Leave a Reply

Your email address will not be published. Required fields are marked *

Back to top button