Kollywood

ಸೂಪರ್‌ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಶೂಟಿಂಗ್ ಮುಕ್ತಾಯ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು, ಕೇಕ್ ಕತ್ತರಿಸುವ ಮೂಲಕ ಚಿತ್ರತಂಡ ಈ ಕ್ಷಣವನ್ನು ಸಂಭ್ರಮಿಸಿದೆ.

ಈ ಫೋಟೋಗಳನ್ನು ಸನ್‌ ಪಿಕ್ಚರ್ಸ್ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.


ನೆಲ್ಸನ್‌ ದಿಲೀಪ್‌ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ 2023ರಲ್ಲಿ ಬಿಡುಗಡೆಯಾಗಿದ್ದ ಜೈಲರ್ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡಿತ್ತು. ಇದರಲ್ಲಿ ಶಿವರಾಜ್‌ಕುಮಾರ್ ಅವರ ಅಭಿನಯಕ್ಕೂ ಅಭಿಮಾನಿಗಳು ಮನಸೋತಿದ್ದರು. ಜೈಲರ್‌ನಲ್ಲಿ ಜಾಕಿ ಶ್ರಾಫ್‌, ಮೋಹನ್‌ಲಾಲ್‌ ಹಾಗೂ ಶಿವರಾಜ್‌ಕುಮಾರ್ ಅವರ ಕಾಂಬಿನೇಷನ್‌ ಗಮನ ಸೆಳೆದಿತ್ತು. ರಜನಿಕಾಂತ್ ಅವರ ಉಲ್ಲಾಸಭರಿತ ಅಭಿನಯ ಚಿತ್ರವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿತ್ತು.

 

Show More

Related Articles

Leave a Reply

Your email address will not be published. Required fields are marked *

Back to top button