Tollywood

ಡಿಫ್ರೆಂಟ್ ಲುಕ್‍ನಲ್ಲಿ ಅಲ್ಲು ಅರ್ಜುನ್ : ಅಟ್ಲೀ ಕಾಂಬಿನೇಷನ್‍ನಲ್ಲಿ ಬರುತ್ತಿದೆ `ರಾಕ’

ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅವರ 44ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಮುಂಬರುವ ಚಿತ್ರದ ಟೈಟಲ್ ಅನಾವರಣಗೊಳಿಸಲಾಗಿದೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಈ ಚಿತ್ರಕ್ಕೆ `ರಾಕ’ ಎಂದು ಹೆಸರಿಡಲಾಗಿದೆ.

ಚಿತ್ರದ ಹೆಸರಿನೊಂದಿಗೆ ಸಿನಿಮಾದಲ್ಲಿನ ಅಲ್ಲು ಅರ್ಜುನ್ ಲುಕ್ ಅನ್ನೂ ಅನಾವರಣಗೊಳಿಸಲಾಗಿದೆ. ಅಲ್ಲು ಅರ್ಜುನ್ ಅವರು ಮಾಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಬೋಳು ತಲೆ ಹೊಂದಿದ್ದಾರೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್‍ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೋಡಿಯಾಗಿದ್ದಾರೆ. ಅಲ್ಲು ಅರ್ಜುನ್ ಜೊತೆ ಇದು ಇವರ ಮೊದಲ ಚಿತ್ರವಾಗಿರಲಿದೆ.

 

View this post on Instagram

 

A post shared by Sun Pictures (@sunpictures)

ಚಿತ್ರತಂಡ ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಒಂಬತ್ತು ವಿಭಿನ್ನ ಭಾಷೆಗಳಲ್ಲಿ ಪೆÇೀಸ್ಟರ್ ಬಿಡುಗಡೆ ಮಾಡಿದೆ. ಈ ಹಿಂದೆ ಈ ಚಿತ್ರಕ್ಕೆ ತಾತ್ಕಾಲಿಕವಾಗಿ AA22xA6 ಹೆಸರಿಡಲಾಗಿತ್ತು. ಈ ಸೈನ್ಸ್ ಫಿಕ್ಷನ್ ಸಿನಿಮಾವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತದೆ.

Show More

Related Articles

Leave a Reply

Your email address will not be published. Required fields are marked *

Back to top button