Tollywood

ಪವನ್ ಕಲ್ಯಾಣ್‍ಗೆ ರಿಲೀಫ್ ನೀಡಿದ ಆಂಧ್ರಪ್ರದೇಶ ಹೈಕೋರ್ಟ್

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರಿಗೆ ಆಂಧ್ರ ಪ್ರದೇಶ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಟನೆ ಮಾಡುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಳೆದ ವರ್ಷ ಪವನ್ ಕಲ್ಯಾಣ್ ತಮ್ಮ `ಹರಿ ಹರ ವೀರ ಮಲ್ಲು’ ಚಿತ್ರಕ್ಕೆ ಸಂಬಂಧಿಸಿದಂತೆ ತಮ್ಮ ಅಧಿಕೃತ ಸ್ಥಾನ ಮತ್ತು ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಐಎಎಸ್ ಅಧಿಕಾರಿ ವಿಜಯ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಜೊತೆಗೆ ತಮ್ಮ ಪ್ರಚಾರ ಮತ್ತು ವಾಣಿಜ್ಯ ಚಟುವಟಿಕೆಗಳ ಮೇಲೆ ನಿಬರ್ಂಧಗಳನ್ನು ವಿಧಿಸುವಂತೆ ಹಾಗೂ ರಾಜ್ಯ ಸಂಪನ್ಮೂಲಗಳ ದುರುಪಯೋಗದ ಆರೋಪದ ತನಿಖೆ ನಡೆಸುವಂತೆ ಕೋರಿದ್ದರು.

ಈ ಅರ್ಜಿ ವಿಚಾರಣೆಯ ವೇಳೆ ಇಂತಹ ನಿರ್ಬಂಧಗಳಿಗೆ ಯಾವುದೇ ಕಾನೂನು ಆಧಾರಗಳಿಲ್ಲ ಎಂದು ಹೇಳಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಈ ಸಂಬಂಧ ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಲಯ 2025ರ ಸೆಪ್ಟೆಂಬರ್ 24 ರಂದು ಆದೇಶ ಕಾಯ್ದಿರಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button