Tollywood

ರಾಮ್ ಚರಣ್ `ಪೆದ್ದಿ’ ಚಿತ್ರದ ಬಿಡುಗಡೆ ಮುಂದೂಡಿಕೆ!

ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ `ಪೆದ್ದಿ’ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈ ಹಿಂದೆ ಘೋಷಿಸಿದಂತೆ ಈ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಜೂನ್‍ಗೆ ಮುಂದೂಡಲಾಗಿದೆ. ಆದರೆ ನಿಖರವಾದ ಬಿಡುಗಡೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ.


ಈ ಬಗ್ಗೆ ಪೋಸ್ಟ್ ಮಾಡಿರುವ ನಿರ್ಮಾಣ ಸಂಸ್ಥೆ `ಸಂಭಾಷಣೆಯ ಭಾಗ ಪೂರ್ಣಗೊಂಡಿದೆ ಹಾಗೂ ಕೇವಲ ಒಂದು ಹಾಡಿನ ಚಿತ್ರೀಕರಣ ಬಾಕಿ ಉಳಿದಿದೆ. ಚಿತ್ರವನ್ನು ಇನ್ನೂ ಅತ್ಯುತ್ತಮ ರೀತಿಯಲ್ಲಿ ಪ್ರಸ್ತುತಪಡಿಸಲು ಬಯಸುತ್ತೇವೆ. ಅದಕ್ಕಾಗಿ, ನಮ್ಮ ತಂತ್ರಜ್ಞರು ಮತ್ತು ಪೋಸ್ಟ್-ಪ್ರೊಡಕ್ಷನ್ ತಂಡಕ್ಕೆ ಪರಿಪೂರ್ಣತೆಯನ್ನು ಸಾಧಿಸಲು ಹೆಚ್ಚಿನ ಸಮಯವನ್ನು ನೀಡುವುದು ಮುಖ್ಯ ಎಂದು ನಾವು ಭಾವಿಸುತ್ತೇವೆ’ ಎಂದು ಬರೆದುಕೊಂಡಿದೆ.

ಈ ಚಿತ್ರದಲ್ಲಿ ರಾಮ್ ಚರಣ್‍ಗೆ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಶಿವರಾಜ್ ಕುಮಾರ್ ಅವರು ಕೂಡಾ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button